ರಾಜಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಗೃಹರಕ್ಷಕ ದಳ, ಪೌರರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಒಟ್ಟು 61 ಅಧಿಕಾರಿ/ಸಿಬ್ಬಂದಿಗಳಿಗೆ ಸನ್ಮಾನ್ಯ ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್ ಅವರು ಪದಕ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಅಪರ ಮುಖ್ಯ ಕಾರ್ಯದರ್ಶಿಗಳಾದ ರಜನೀಶ್ ಗೋಯಲ್, ರವಿ ಹಾಗೂ ಇಲಾಖೆಯ ಆರಕ್ಷಕ ಮಹಾನಿರ್ದೇಶಕರಾದ ಡಾ.ಅಮರ್ ಕುಮಾರ್ ಪಾಂಡೆ ಅವರು ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಮತ್ತು ಪದಕ ವಿಜೇತರ ಸಂಬಂಧಿಗಳು ಉಪಸ್ಥಿತರಿದ್ದರು.