23 C
Bengaluru
Friday, December 13, 2024

ಜನಸ್ನೇಹಿ ಪೊಲೀಸರಿಗೆ ಜನರಿಂದಲೇ ಸನ್ಮಾನ

Date:


ಕೊಲೆ ಕೇಸ್ ಬೇಧಿಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು ಗ್ರಾಮಸ್ಥರೆಲ್ಲಾ ಸೇರಿ ಅದ್ಧೂರಿಯಾಗಿ ಸನ್ಮಾನಿಸಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ಪೊಲೀಸ್ ಠಾಣೆಯ ಇನ್ಸೆಪೆಕ್ಟರ್, ಸಬ್ ಇನ್ಸೆಪೆಕ್ಟರ್, ಸಿಬ್ಬಂದಿಗಳು ಸಾರ್ವಜನಿಕರಿಂದ ಪ್ರಶಂಸೆಗೆ ಒಳಗಾದವರು.‌ ಕೊಲೆ ಕೇಸ್ ಅನ್ನು ಶೀಘ್ರವಾಗಿ ಬಗೆಹರಿಸಿ ಕೊಲೆ ಮಾಡಿದವರನ್ನು ಜೈಲಿಗಟ್ಟುವಲ್ಲಿ ಪೊಲೀಸರು ತೋರಿದ ವೃತ್ತಿಪರತೆಯನ್ನು ಜನರು ಕೊಂಡಾಡಿದ್ದಾರೆ.
ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಗ್ರಾಮದ ಮಂಜುನಾಥ್ ನನ್ನು ಫೆ 3 ರಂದು ಆತನ ಪತ್ನಿ ಹರ್ಷಿತಾ, ಪ್ರೀಯಕರ ಹಾಗೂ ಆತನ ಸಹಚರರೊಂದಿಗೆ ಸೇರಿ ಬರ್ಬರವಾಗಿ ಹತ್ಯೆಗೈದು ಯಾರಿಗೂ ಅನುಮಾನ ಬರಬಾರದೆಂದು ಶವ ಹಾಗೂ ಬೈಕ್ ಅನ್ನು ಕೆರೆಯಲ್ಲಿ ಎಸೆದಿದ್ದರು.
ಪ್ರಕರಣ ದಾಖಲಿಸಿಕೊಂಡ ಕುಣಿಗಲ್ ಪೊಲೀಸರು ತನಿಖೆ ನಡೆಸಿ, ಶೀಘ್ರವಾಗಿ ಎಂಟು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಈ ಹಿನ್ನಲೆಯಲ್ಲಿ ತಾಲೂಕಿನ ಸೀನಪ್ಪನಹಳ್ಳಿ ಹೊಸಕೆರೆ ಮೊದಲಾದ ಊರಿನ ಗ್ರಾಮಸ್ಥರು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಹುಲ್ ಕುಮಾರ್ ಶಹಪುರ್‌ವಾದ್, ಡಿವೈಎಸ್‌ಪಿ ಲಕ್ಷ್ಮಿಕಾಂತ್, ಸಿಪಿಐಗಳಾದ ಗುರುಪ್ರಸಾದ್, ಅರುಣ್‌ಸಾಲಂಕಿ, ಪಿಎಸ್‌ಐ ಜಮಲ್‌ಅಹಮದ್ ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಿದರು.
ಪೊಲೀಸ್ ಸಿಬ್ಬಂದಿ ಹೀರೋಗಳು
ಎಸ್ಪಿ ರಾಹುಲ್ ಕುಮಾರ್ ಶಹಪುರ್‌ವಾದ್ ಮಾತನಾಡಿ ಕೊಲೆ ಪ್ರಕರಣ ಪತ್ತೆ ಹಚ್ಚುವಲ್ಲಿ ಪೊಲೀಸ್ ಸಿಬ್ಬಂದಿಗಳ ಪಾತ್ರ ಅತ್ಯ ಅಮೂಲ್ಯವಾಗಿದೆ ಹಾಗಾಗಿ ಇದರ ಶ್ರೇಯಸ್ಸು ಪೊಲೀಸ್ ಸಿಬ್ಬಂದಿಗೆ ಸಲ್ಲಬೇಕಾಗಿದೆ ಕೊಲೆ ಪ್ರಕರಣ ಭೇದಿಸಿದ ಪೊಲೀಸ್ ಸಿಬ್ಬಂದಿಗಳೇ ಹೀರೋ ಆಗಿದ್ದಾರೆ ಎಂದು ಮೆಚ್ಚಿಗೆ ವ್ಯಕ್ತಪಡಿಸಿದರು.

ಆರೋಪಿಗಳಿಗೆ ಶಿಕ್ಷೆಯಾಗಲು ಸಾಕ್ಷಿ ಮುಖ್ಯ

ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಲಿದ್ದಾರೆ, ಆದರೆ ಆರೋಪಿಗಳಿಗೆ ಶಿಕ್ಷೆಯಾಗಬೇಕಾದರೆ ಸಾಕ್ಷಿಗಳ ಮುಖ್ಯವಾಗಿರುತ್ತದೆ, ಹಾಗಾಗಿ ಯಾರು ಸಾಕ್ಷಿಗಳಿಗೆ ಸಹಿ ಹಾಕಿದ್ದೀರ ಅವರು ಯಾವುದೇ ಆಸೆ ಆಮಿಷ ಹಾಗೂ ಬೆದರಿಕೆಗೆ ಅಂಜದೇ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷಿ ಹೇಳಿದರೇ, ನೂರಕ್ಕೆ ನೂರರಷ್ಟು ಆರೋಪಿಗಳಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದರು.
ಜನಮನ್ನಣೆ ಗಳಿಸಿದ ಕುಣಿಗಲ್ ಪೊಲೀಸರು
ಇದೇ ವೇಳೆ ಅನಾಥ ಶವಗಳ ಶವ ಸಂಸ್ಕಾರಕ್ಕೆ ಸೇವೆ ಸಲ್ಲಿಸುತ್ತಿರುವ ಅಂಬ್ಯೂಲೆನ್ಸ್ ಚಾಲಕರು, ಆಸ್ಪತ್ರೆ ಸಿಬ್ಬಂದಿ ಅವರನ್ನು ಪೊಲೀಸ್ ಇಲಾಖೆಯಿಂದ ಎಸ್ಪಿ ರಾಹುಲ್ ಕುಮಾರ್ ಶಹಪುರ್ ವಾಡ ರವರು ಸನ್ಮಾನಿಸಿ ಇನ್ನಷ್ಟು ಮಂದಿ ಇಂತಹ ಕಾರ್ಯಗಳಲ್ಲಿ ಭಾಗಿಯಾಗಲು ಇವರು ಪ್ರೇರಕ ರೆಂಬಂತೆ ನಡೆದು ಕೊಂಡರು.

Latest Stories

LEAVE A REPLY

Please enter your comment!
Please enter your name here