ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಶ್ವ ಹಿರಿಯರ ನಿಂದನೆ ಜಾಗೃತಿ ದಿನ ಸಮಾರಂಭವನ್ನು ಆಯೋಜಿಸಲಾಗಿತ್ತು.
ಈ ಸಭೆಗೆ ಮಾನ್ಯ ಶ್ರೀ. ಬಿ. ದಯಾನಂದ್,ಐ.ಪಿ.ಎಸ್, ಪೊಲೀಸ್ ಆಯುಕ್ತರು ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸೈಬರ್ ಕ್ರೈಂ ಅಪರಾಧದ ಬಗ್ಗೆ ಹಿರಿಯ ನಾಗರೀಕರಿಗೆ ಅರಿವು ಮೂಡಿಸಲಾಯಿತು. ಹಿರಿಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಪೊಲೀಸರ ಪಾತ್ರದ ಬಗ್ಗೆ ಹಾಗೂ ಹಿರಿಯ ನಾಗರೀಕರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು ಮತ್ತು ಅವುಗಳನ್ನು ಬಗೆ ಹರಿಸುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಹಿರಿಯ ನಾಗರೀಕರ ಅನುಕೂಲಕ್ಕಾಗಿ ಸಹಾಯವಾಣಿ 1090ಮತ್ತು 14567ನಂಬರ್ ಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಲಾಯಿತು.
ಹಿರಿಯ ನಾಗರೀಕರಿಕರ ಸಹಾಯಕ್ಕೆ ಸಹಾಯವಾಣಿವಿಶ್ವ ಹಿರಿಯರ ನಿಂದನೆ ಜಾಗೃತಿ ದಿನ
Date: