ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಹಿಟ್ & ರನ್ ಗೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.ಬೆಂಗಳೂರು ನಗರ ತಾಲೂಕಿನ ಚಿಕ್ಕಜಾಲ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ರೋಹಿತ್ (22), ಸುಚಿತ್ (22) ಹಾಗೂ ಹರ್ಷ (22) ಎಂದು ಗುರುತಿಸಲಾಗಿದೆ.ಮೂವರು ವಿದ್ಯಾರ್ಥಿಗಳು ಬೈಕ್ ನಲ್ಲಿ ಲಾಂಗ್ ಡ್ರೈವ್ ಹೋಗುವಾಗ ತಡರಾತ್ರಿ 1 ಗಂಟೆ ಸುಮಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ವಿದ್ಯಾರ್ಥಿಗಳ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ರಭಸಕ್ಕೆ ವಿದ್ಯಾರ್ಥಿಗಳು ದೇಹಗಳು ಛಿದ್ರ ಛಿದ್ರವಾಗಿ ಬಿದ್ದಿವೆ. ಅಪಘಾತದ ಬಳಿಕ ವಾಹನ ಚಾಲಕ ಪರಾರಿಯಾಗಿದ್ದಾನೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಜಾಲಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.