28.7 C
Bengaluru
Tuesday, October 8, 2024

ಸಾರ್ವಜನಿಕರ ಭೇಟಿಗೆ ಸಮಯ ನಿಗದಿ

Date:

ಸಾರ್ವಜನಿಕರ ಭೇಟಿಗೆ ಸಮಯ ನಿಗದಿ
ಅಧಿಕಾರಿಗಳು ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ದೊರಕುವಂತಿರಬೇಕು:ಶಾಲಿನೀ ರಜನೀಶ್
ಜನ ಸ್ಪಂದನಾ ಕಾರ್ಯಕ್ರಮದಲ್ಲಿ ತಮ್ಮ ದೂರು ದುಮ್ಮಾನಗಳನ್ನು ಹೇಳಿಕೊಳ್ಳಲು ಜನಸಾಗರವೇ ಹರಿದು ಬರುತ್ತಿರುವುದನ್ನು ಕಂಡು ರಾಜ್ಯ ಸರ್ಕಾರವು ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರೀ ಕಚೇರಿಗಳಲ್ಲಿ ಸಾರ್ವಜನಿಕರ ಭೇಟಿಗಾಗಿ ಸಮಯವನ್ನು ನಿಗದಿ ಪಡಿಸಿದೆ.
ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಮ್ಮ ದೂರು ಹಾಗೂ ಸಮಸ್ಯೆಗಳನ್ನು ಹೊತ್ತು ಹಲವು ಜನರು ಸರತಿ ಸಾಲಿನಲ್ಲಿ ನಿಂತು ತಮ್ಮ ಸಮಸ್ಯೆಯ ಪರಿಹಾರಕ್ಕಾಗಿ ಬರುತ್ತಿರುವುದನ್ನು ಗಮನಿಸಿದ ರಾಜ್ಯ ಸರ್ಕಾರವು, ಸರ್ಕಾರದ ಕಚೇರಿಗಳಲ್ಲಿ ಅಧಿಕಾರಿಗಳು ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಸಾರ್ವಜನಿಕರಿಗೆ ಕಡ್ಡಾಯವಾಗಿ ಭೇಟಿಗೆ ದೊರೆಯಬೇಕು, ಹಾಗೂ ಸಾರ್ವಜನಿಕರ ಭೇಟಿಗೆ ಎಂದು ನಿಗದಿ ಪಡಿಸಿರುವ ಸಮಯದಲ್ಲಿ ಬೇರೆ ಯಾವುದೇ ಸಭೆ ಕಾರ್ಯಕ್ರಮಗಲ್ಲಿ ಭಾಗಿಯಾಗದೆ ಸಾರ್ವಜನಿಕರ ಭೇಟಿಗೆ ಅವಕಾಶ ಮಾಡಿಕೊಡಬೇಕು ಮತ್ತು ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಒದಗಿಸಲು ಸಹಕರಿಸಬೇಕೆಂದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಾದ ಶಾಲಿನೀ ರಜನೀಶ್ ರವರು ಆದೇಶಿಸಿದ್ದಾರೆ.
ಒಟ್ಟಿನಲ್ಲಿ ರಾಜ್ಯ ಸರ್ಕಾರವು ಸಾರ್ವಜನಿಕರ ಅಹವಾಲು ಸಮಸ್ಯೆ ಹಾಗೂ ಶೀಘ್ರ ಸ್ಪಂದನೆಗಾಗಿ ಹತ್ತು ಹಲವು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಿರುವುದು ಸ್ವಾಗತಾರ್ಹ ವಿಚಾರ.
ಜನ ಮೆಚ್ಚಿದ ಸರ್ಕಾರದ ಜನ ಸ್ಪಂದನ ಕಾರ್ಯಕ್ರಮಗಳು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Latest Stories

LEAVE A REPLY

Please enter your comment!
Please enter your name here