ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯ ಮುಗಿದಿದ್ದು ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತೀರ್ಪು ನೀಡಿದರೆ ಅಭಿಮಾನಿಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದ ಬಳಿ 2 ಕೆಎಸ್ ಆರ್ ಪಿ ತುಕಡಿ ಹಾಗೂ ಒಂದು ಬಿಎಂಟಿಸಿ ಬಸ್ ನಿಯೋಜಿಸಲಾಗಿದೆ.
ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.