ಇದೆ ಅಕ್ಟೊಬರ್ 3 ರಂದು ರಾಜ್ಯಾದ್ಯಂತ 402 PSI ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ.ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಸಲಾಗಿದೆ.
ಅದರಲ್ಲೂ ಪ್ರಮುಖವಾಗಿ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಅತ್ಯಂತ ಕಠಿಣ ರೂಲ್ಸ್ ಜಾರಿ ಮಾಡಲಾಗಿದೆ.ಕಳದ ಬಾರಿ ಆದ ಅಕ್ರಮದ ಹಿನ್ನಲೆ ಈ ಬಾರಿ ಬೀಗಿಭದ್ರತೆ ಮಾಡಲಾಗಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಎಲ್ಲಾ ಪರೀಕ್ಷಾ ಕೊಠಡಿಯನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಇದನ್ನು ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಇನ್ನು ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ.
KEA ಕಠಿಣ ರೂಲ್ಸ್ ಏನು?ಇನ್ನು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ಬರೆಯಲು 66,990 ಅರ್ಹರಾಗಿದ್ದು, ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ ಮಾಡಲಾಗಿದೆ. ಈ ಹಿನ್ನಲೆ ಪರೀಕ್ಷಾರ್ಥಿಗಳು ಅರ್ಧ ಗಂಟೆ ಮೊದಲೇ ಕೇಂದ್ರದೊಳಗೆ ಇರಬೇಕು. ಒಮ್ಮೆ ಒಳಗೆ ಹೋದರೆ ಪರೀಕ್ಷೆ ಮುಗಿದ ನಂತರವೇ ಹೊರಬರಬೇಕು. ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ.