19.1 C
Bengaluru
Saturday, February 8, 2025

ಮಲ್ಲೇಶ್ವರಂನಲ್ಲಿ ಭೂಕುಸಿತ…

Date:

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮಲ್ಲೇಶ್ವರಂನಲ್ಲಿ ಭೂಕುಸಿತವಾಗಿದ್ದು, ಬಿಬಿಎಂಪಿ ಕಳಪೆ ಕಾಮಗಾರಿ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಲ್ಲೇಶ್ವರಂನ 13 ನೇ ಕ್ರಾಸ್ ನ ರಸ್ತೆಯಲ್ಲಿ ರಸ್ತೆ ಕುಸಿತವಾಗಿ ಬೃಹತ್ ಮಟ್ಟದ ಗುಂಡಿ ನಿರ್ಮಾಣವಾಗಿದೆ. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತವಾಗಿದೆ. ಬಿಬಿಎಂಪಿ ಕಳಪೆ ಕಾಮಗಾರಿಯೇ ಘಟನೆಗೆ ಕಾರಣವಾಗಿದ್ದು, ಬಿಬಿಎಂಪಿ ವಿರುದ್ಧ ಮಲ್ಲೇಶ್ವರಂ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹಲವಡೆ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಗಿದೆ. ಬೆಂಗಳೂರಿನ ಶಾಂತಿನಗರ, ಕೋರಮಂಗಲ, ರಿಚ್ಮಂಡ್ ವೃತ್ತ, ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ಯಶವಂತಪುರ ಹಾಗೂ ನಂದಿನಿ ಲೇಔಟ್ ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ.ಈ ವೇಳೆ ವಾಹನ ಸವಾರರು ಪರದಾಟ ನಡೆಸಿದರು.

ಭಾರೀ ಮಳೆಯಿಂದ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ. ಕೆಳ ಪ್ರದೇಶಗಳಲ್ಲಿ ಇರುವ ಅಂಗಡಿ -ಮುಂಗಟ್ಟು, ಪಾರ್ಕಿಂಗ್‌ ಲಾಟ್‌ಗಳಲ್ಲಿ ನೀರು ತುಂಬಿದ್ದು ಅಪಾರ ನಷ್ಟ ಉಂಟಾಗಿದೆ.ಕೇಂದ್ರೀಯ ವಿಹಾರ್ ಅಪಾರ್ಟ್ ಮೆಂಟ್ ನ ಕಾಂಪೌಡ್ ಕುಸಿದ ಪರಿಣಾಮ ಅಪಾರ್ಟ್ ಮೆಂಟ್ ಗೆ ನೀರು ನುಗ್ಗಿದ್ದು, 80 ಕ್ಕೂ ಹೆಚ್ಚು ಕಾರುಗಳು, 100 ಕ್ಕೂ ಹೆಚ್ಚು ಬೈಕ್ ಗಳು ಜಲಾವೃತವಾಗಿದ್ದು, ಕರೆಂಟ್ ಇಲ್ಲದೇ ಅಪಾರ್ಟ್ ಮೆಂಟ್ ನಿವಾಸಿಗಳು ರಾತ್ರಿ ಕಳೆದಿದ್ದಾರೆ.

Latest Stories

LEAVE A REPLY

Please enter your comment!
Please enter your name here