25.5 C
Bengaluru
Monday, September 1, 2025

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಸಿಬ್ಬಂದಿಗಳನ್ನು ಖಾಯಂಗೊಳಿಸಿ : ಹೈಕೋರ್ಟ್

Date:

ಬೆಂಗಳೂರಿನ ಪ್ರಸಿದ್ಧ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸುಮಾರು 20 ವರ್ಷಗಳಿಗೂ ಹೆಚ್ಚು ಕಾಲದಿಂದ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸಿದ್ದ ದಾದಿಯರನ್ನು ಖಾಯಂಗೊಳಿಸುವಂತೆ ಹೈಕೋರ್ಟ್​ ಆದೇಶಿಸಿದೆ.ಬಿ.ಜೆ.ರಾಣಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌.ಎಸ್‌.ಸಂಜಯಗೌಡ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ. ರಾಜ್ಯದ ಅತ್ಯುತ್ತಮ ಸಂಸ್ಥೆಗಳಲ್ಲಿ ಒಂದೆನಿಸಿರುವ ಸಂಸ್ಥೆ ಮಾದರಿಯಾಗಬೇಕು.

ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಅಧ್ಯಕ್ಷರಾಗಿರುವ ಗೌರ್ನರಿಂಗ್‌ ಕೌನ್ಸಿಲ್‌ ಆಡಳಿತ ನಿರ್ವಹಣೆ ನೋಡಿಕೊಳ್ಳುವ ಸಂಸ್ಥೆ ತನ್ನ ನರ್ಸ್‌ಗಳ ವಿಚಾರದಲ್ಲಿ ನ್ಯಾಯಯುತವಾಗಿ ನಡೆದುಕೊಳ್ಳಬೇಕು ಎಂದು ಪೀಠ ಹೇಳಿದೆ.ಹಾಗಾಗಿ ಅರ್ಜಿದಾರರು 20 ವರ್ಷಕ್ಕೂ ಅಧಿಕ ಸಮಯದಿಂದ ಗುತ್ತಿಗೆ ಆಧಾರದ ಮೇಲೆ ಸ್ಟಾರ್ಫ್‌ ನರ್ಸ್‌ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಹಾಗಾಗಿ 10 ವರ್ಷ ಸೇವೆ ಪೂರೈಸಿದ ದಿನದಿಂದ ಅನ್ವಯವಾಗುವಂತೆ ಅವರ ಸೇವೆಯನ್ನು ಖಾಯಂಗೊಳಿಸಬೇಕು. 10 ವರ್ಷವನ್ನು ಪರಿಗಣಿಸುವಾಗ ಮಧ್ಯದಲ್ಲಿ ಒಂದೆರಡು ದಿನ ಬ್ರೇಕ್‌ ಅವಧಿಯನ್ನು ಪರಿಗಣಿಸಬಾರದು ಎಂದು ಪೀಠ ಸೂಚನೆ ನೀಡಿದೆ.

Latest Stories

LEAVE A REPLY

Please enter your comment!
Please enter your name here