ದಾವಣಗೆರೆ ಜಿಲ್ಲೆಯಲ್ಲಿ ಅಕ್ಟೋಬರ್ 11 ಮತ್ತು 12 ರಂದು ಆಯುಧ ಪೂಜೆ ಮತ್ತು ವಿಜಯ ದಶಮಿ ಹಬ್ಬ ಆಚರಿಸಲಿದ್ದು. ಈ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಮುನ್ನೆಚ್ಚರಿಕೆ ಕ್ರಮವಾಗಿ ಅಕ್ಟೋಬರ್ 12 ರ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಹೈಸ್ಕೂಲ್ ಮೈದಾನದಲ್ಲಿ ಆಯುಧ ಪೂಜೆ, ವಿಜಯದಶಮಿಯ ಹೂ, ಇತರೆ ವಸ್ತುಗಳ ಮಾರಾಟಕ್ಕೆ ಅವಕಾಶಆಯುಧಪೂಜೆ ಹಾಗೂ ವಿಜಯದಶಮಿ ಸಲುವಾಗಿ ಬಾಳೆಕಂಬ, ಹೂ, ಹಣ್ಣು ಮಾವಿನ ತೋರಣ, ಬೂದು ಗುಂಬಳ ಕಾಯಿ, ಕಾಚಿಕಡ್ಡಿ ಹಾಗೂ ಸಗಣಿ ಗುರ್ಜಿಗಳನ್ನು ಮಾರಾಟ ಮಾಡುವುದರಿಂದ ನಗರಾದ್ಯಂತ ಸಂಚಾರ ವ್ಯವಸ್ಥೆಗೆ ಹಾಗೂ ಸಾರ್ವಜನಿಕರಿಗೆ, ತೊಂದರೆಯಾಗುತ್ತಿರುವ ಕಾರಣ ಅಕ್ಟೋಬರ್ 10 ರಿಂದ 12 ರವರೆಗೆ ಹೈಸ್ಕೂಲ್ ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಮಾತ್ರವೇ ಈ ವಸ್ತುಗಳ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ನಗರದ ಇತರೆ ಯಾವುದೇ ಭಾಗಗಳಲ್ಲಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗದಂತೆ ಸಾಮಗ್ರಿಗಳನ್ನು ಮಾರಾಟ ಮಾಡಿ, ಉಳಿದ ಸಾಮಗ್ರಿಗಳನ್ನು ಅಲ್ಲಿಯೇ ಬಿಡದೇ ಸಾಗಿಸುವಂತೆ, ತಪ್ಪಿದಲ್ಲಿ ಪ್ರತಿ ಮಾರಾಟಗಾರರಿಂದ ತ್ಯಾಜ್ಯ ಸಂಗ್ರಹಣಾ ಶುಲ್ಕವನ್ನು ವಸೂಲಿ ಮಾಡಲಾಗುವುದೆಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.