19.1 C
Bengaluru
Saturday, February 8, 2025

ಕನ್ನಡ ಬಾವುಟ ಕಡ್ಡಾಯ!

Date:

ಮುಂದಿನ ತಿಂಗಳು ನವೆಂಬರ್​ 1ಕ್ಕೆ ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸುವ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕಾರ್ಖಾನೆಗಳು, ಐಟಿಬಿಟಿ ಕಚೇರಿಗಳಲ್ಲಿ ಕನ್ನಡ ಬಾವುಟ ಹಾರಿಸುವುದು ಕಡ್ಡಾಯವೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದಾರೆ.ಈ ಕುರಿತು ಮಾತನಾಡಿದ ಅವರು,50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ.

ನವೆಂಬರ್​ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ನವೆಂಬರ್ 1​ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದರು.ಹೆದರಿಸಿದರೆ ಕಾನೂನು ಕ್ರಮಬೆಂಗಳೂರಿನಲ್ಲಿ ಎಲ್ಲರೂ ರಾಜೋತ್ಸವ ಆಚರಣೆ ಮಾಡುತ್ತಾರೆ. ರಾಜ್ಯೋತ್ಸವ ಆಚರಣೆಗೆ ಯಾವ ಕನ್ನಡ ಸಂಘಟನೆಗಳು ಕೂಡ ಒತ್ತಡ ಹೇರಬಾರದು. ಸರ್ಕಾರವೇ ಆದೇಶಿಸಿದೆ.

ಅದರಂತೆ ರಾಜೋತ್ಸವ ಆಚರಣೆ ಮಾಡುತ್ತಾರೆ. ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಅಂತ ಸರ್ಕಾರ ನಿರ್ಧಾರ ಮಾಡುತ್ತೆ. ಕನ್ನಡ ಸಂಘಟನೆಗಳು ಖಾಸಗಿ ಸಂಸ್ಥೆಗಳ ಬಳಿ ಹೋಗಿ ಗಲಾಟೆ, ಬೆದರಿಸುವುದು ಬೇಡ. ಒಂದು ವೇಳೆ ಹೆದರಿಸುವುದು ಮತ್ತು ಬೆದರಿಕೆ ಹಾಕುವುದು ಕಂಡು ಬಂದರೆ ಅಂತಹ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

Latest Stories

LEAVE A REPLY

Please enter your comment!
Please enter your name here